ಮಾ.17: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ
ಉಡುಪಿ: ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಮಾ.17ರಂದು ಶ್ರೀಮನ್ಮಹಾರಥೋತ್ಸವ ನೆರವೇರಲಿದೆ. ದೇಗುಲದ ವಾರ್ಷಿಕ ಮಹೋತ್ಸವದ ಅಂಗವಾಗಿ ಮಾರ್ಚ್ 20ರ ವರೆಗೆ ಪ್ರತಿದಿನ ಮಹಾಪೂಜೆ, ಪ್ರಧಾನ ಹೋಮ, ಕಲಶಾಭಿಷೇಕ, ರಂಗಪೂಜೆ ಬಲಿ, ಅಷ್ಟಾವಧಾನ ಸೇವೆಗಳು, ಉತ್ಸವ ಬಲಿ, ಪೂರ್ಣಾಹುತಿ ತೆಪ್ಪೋತ್ಸವ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಾ. 18ರಂದು ರಾತ್ರಿ ಆರಾಟೋತ್ಸವ ಹಾಗೂ ಮಾ. 20ರಂದು ಬೆಳಿಗ್ಗೆ ಬ್ರಹ್ಮಕುಂಭಾಭಿಷೇಕ ಜರುಗಲಿದೆ. ಮಾ. 17ರಂದು ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲಿ ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ ಎಂದು […]