ಕಾರ್ಕಳ ಎಂ. ಪಿ. ಎಂ. ಕಾಲೇಜಿನಲ್ಲಿ ಮಾನವಿಕ ಸಂಘ ಉದ್ಘಾಟನೆ

ಕಾರ್ಕಳ : ಇಲ್ಲಿನ ಎಂ. ಪಿ. ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಡಿ.2 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳೊಂದಿಗೆ ಉದ್ಯೋಗ ಜೀವನವನ್ನು ರೂಪಿಸಲು ಅನೇಕ ಅವಕಾಶಗಳಿವೆ.‌ ಮೂರು ವರ್ಷದ ಪದವಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ತಯಾರಿ ನಡೆಸಬೇಕು, ಸತತ ಪರಿಶ್ರಮ ಮತ್ತು ಓದಿನ […]