ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ, ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. “ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು ಸಚಿವರು ಹಾರೈಸಿದರು. ಬೆನ್ನುಮೂಳೆಗೆ ಪೆಟ್ಟುಬಿದ್ದು […]