ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  www.ssp.postmatric.karnataka.gov.in ವೆಬ್‌ಸೈಟ್ ಅಥವಾ ಇಲಾಖಾ […]