ಬಾಲಭವನ ಕಚೇರಿ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಚೇರಿ ಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆಯೊಂದಿಗೆ, ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಮೇ 11 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಗೀತ ನೃತ್ಯ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜುಲೈ 9: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20 ನೇ ಸಾಲಿಗೆ ಶಿಷ್ಯವೇತನದ ಬದಲಾಗಿ, ಅಕಾಡೆಮಿ ವತಿಯಿಂದ ಪ್ರತಿಯೊಂದು ಜಿಲ್ಲೆಯಲ್ಲಿ (ಅರ್ಜಿಗಳನ್ನಾಧರಿಸಿ) ಗುರುಗಳ ಮುಖಾಂತರ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಕಲಾ ಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ /ಅಭ್ಯಾಸ ಮಾಡುತ್ತಿರುವ/ ಹೆಚ್ಚಿನ ಅಭ್ಯಾಸ ಮಾಡಲಿಚ್ಛಿಸುವ ವಿದ್ಯಾರ್ಥಿಗಳಿಗೆ 5 ತಿಂಗಳವರೆಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 14 ರಿಂದ 26 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು […]

ಪ್ಲಾಸ್ಟಿಕ್ ತಂತ್ರಜ್ಞಾನ: ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 30: ಮೈಸೂರಿನ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಭಾರತ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ 2 ನೇ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ-2 ವರ್ಷ, ಡಿಪ್ಲೋಮಾ […]

ಬೀಡಿ ಕಾರ್ಮಿಕರ ಮಾಹಿತಿ ನೋಂದಣಿ ಅಭಿಯಾನ

ಉಡುಪಿ, ಮೇ 22: ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ಬೀಡಿ ಕಾರ್ಮಿಕರ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ತಮ್ಮ ಗುರುತಿನ ಚೀಟಿ, ಬ್ಯಾಂಕ್ ಖಾತೆ ವಿವರ, ರೇಷನ್ ಕಾರ್ಡ್ ಹಾಗೂ ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಜೊತೆ ಹತ್ತಿರದ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ ಮಾಹಿತಿ ನೋಂದಾಯಿಸಬೇಕಾಗಿ ಕಾರ್ಮಿಕ ಕಲ್ಯಾಣ ಆಯುಕ್ತ ಕೆ.ಶೇಖರ್ ತಿಳಿಸಿರುತ್ತಾರೆ. ಈ ಪ್ರಕ್ರಿಯೆ ಕಳೆದ ವರ್ಷ ಪ್ರಾರಂಭವಾಗಿದ್ದು, ಈವರೆಗೆ ಕೇವಲ ಶೇ.30 ಬೀಡಿ ಕಾರ್ಮಿಕರು ತಮ್ಮ […]