₹10 ಲಕ್ಷ ವೆಚ್ಚದಲ್ಲಿ ಅಪ್ಪು ಅಭಿಮಾನಿಯಿಂದ ಗ್ರಂಥಾಲಯ ನಿರ್ಮಾಣ

ಮೈಸೂರು : ಅಪ್ಪು (ಪುನೀತ್ ರಾಜ್‌ಕುಮಾರ್) ಅಭಿಮಾನಿಯೊಬ್ಬರು ಮೈಸೂರಿನಲ್ಲಿ ಗ್ರಂಥಾಲಯವನ್ನು ನಿರ್ಮಿಸಿದ್ದಾರೆ. ದಿ. ಪುನೀತ್ ರಾಜ್‌ಕುಮಾರ್ ಅವರು ಇಹಲೋಕ ತ್ಯಜಿಸಿ ಒಂದೂವರೆ ವರ್ಷ ಕಳೆಯುತ್ತಿದೆ. ನಟನ ಅಭಿಮಾನಿಗಳು ಒಂದಲ್ಲೊಂದು ರೀತಿಯ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುತ್ತಾರೆ. ಈ ಮೂಲಕ ಅಪ್ಪು ಅಮರ ಎಂದು ಜಗತ್ತಿಗೆ ಸಾರುತ್ತಿದ್ದಾರೆ. ಟಿ. ನರಸೀಪುರ ಬಳಿಯ ಮೇದಿನಿ ಗ್ರಾಮದ ಎಂ.ಎನ್.ಕುಮಾರ್ ಎಂಬವರು ಗ್ರಂಥಾಲಯ ನಿರ್ಮಿಸಿ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಅಪ್ಪುವಿನ ಅಪ್ಪಟ ಅಭಿಮಾನಿಯಾಗಿರುವ ಇವರು ಅವರ ನೆನಪಿಗೋಸ್ಕರ 10 ಲಕ್ಷ ರೂಪಾಯಿ ಖರ್ಚಿನಲ್ಲಿ ಗ್ರಂಥಾಲಯ […]