ಮುಂದಿನ 4 ದಿನ ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಉಡುಪಿ/ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ, ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು ಮತ್ತು ಗಾಳಿಯ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ ಇರುವುದರಿಂದ ಸಮುದ್ರವು ಪ್ರಕ್ಷುಬ್ದತೆಯಿಂದ ಕೂಡಿರುತ್ತದೆ ಹಾಗಾಗಿ ಮುಂದಿನ 4 ದಿನಗಳ ಕಾಲ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ. ತುರ್ತು ಸಂದರ್ಭದಲ್ಲಿ ಕರೆಗಾಗಿ: […]
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ಹಾಗೂ ನದಿ ತೀರ ಪ್ರದೇಶಗಳಲ್ಲಿ ಇಳಿಯಬಾರದು. ಮಕ್ಕಳು ಮತ್ತು ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲಬಾರದು. […]
ಆಗ್ನೇಯ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ: ಕರಾವಳಿ ಕರ್ನಾಟಕ್ಕೆ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಉಡುಪಿ: ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯ ಪ್ರಭಾವದ ಅಡಿಯಲ್ಲಿ, ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ ಮತ್ತು ಸಂಬಂಧಿತ ಚಂಡಮಾರುತದ ಪರಿಚಲನೆಯು ವಿಸ್ತರಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಇದು ಉತ್ತರ-ವಾಯುವ್ಯದ ಕಡೆಗೆ ಚಲಿಸುವ ಮತ್ತು ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತವಾಗಿ ಪರಿಣಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರಗಳಾದ ಕಾರವಾರ, ಮಂಗಳೂರು (0824 […]
ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ದ ವಾತಾವರಣ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಉಡುಪಿ: ಭಾರತೀಯ ಹವಾಮಾನ ಇಲಾಖೆಯು ಭಾನುವಾರ ಮಧ್ಯಾಹ್ನದಂದು ಮುಂದಿನ ಎರಡು ದಿನ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಶುಕ್ರವಾರ ರಾತ್ರಿ ಮಹಾಬಲಿಪುರಂ ಬಳಿ ಭೂಕುಸಿತಕ್ಕೆ ಕಾರಣವಾದ ಮಾಂಡೌಸ್ ಚಂಡಮಾರುತದ ಹವಾಮಾನ ವ್ಯವಸ್ಥೆಯಿಂದಾಗಿ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಮಳೆಯಾಗಿದೆ. ತಮಿಳುನಾಡು, ದಕ್ಷಿಣ ಒಳ ಕರ್ನಾಟಕ ಮತ್ತು ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಮೇಲೆ ಮತ್ತು ಕೇರಳ […]
ಹವಾಮಾನ ವೈಪರೀತ್ಯ: ಪ್ರತಿದಿನದ ಮಾಹಿತಿಗಾಗಿ ವೆಬ್ಸೈಟ್ ನೋಡಿ
ಉಡುಪಿ: ಪೂರ್ವ ಮಾನ್ಸೂನ್ ಮಳೆಯು ಈಗಾಗಲೇ ಪ್ರಾರಂಭವಾಗಿದ್ದು, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಗಳಲ್ಲಿ ಈ ಅವಧಿಯಲ್ಲಿ ಚಂಡಮಾರುತಗಳು ಬೀಸುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಅತಿಯಾದ ಮಳೆ ಹಾಗೂ ಜೋರಾದ ಗಾಳಿ ಭೂಮಿಯ ಕಡೆಗೆ ಬೀಸುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರತಿದಿನದ ಮುನ್ಸೂಚನೆಯ ಮಾಹಿತಿಗಳನ್ನು mausam.imd.gov.in/bengaluru ನಲ್ಲಿ ಪಡೆಯಬಹುದಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.