ತುಳು ಚಿತ್ರನಟ ಅರವಿಂದ ಬೋಳಾರ್ ಬೈಕ್ ಸ್ಕಿಡ್: ಕಾಲಿಗೆ ಏಟು 

ಮಂಗಳೂರು: ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವೊಂದು ನಗರದ ಪಂಪ್‌ವೆಲ್ ಬಳಿ ಇಂದು ಸ್ಕಿಡ್ಡಾಗಿ ಉರುಳಿದ್ದು ನಟನ ಕಾಲಿಗೆ ಏಟಾಗಿದೆ. ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಷ್ಟೊಂದು ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಅರವಿಂದ್ ಬೋಳಾರ್ ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಬ್ರೇಕ್ ಹಾಕಿದ್ದು, ಈ ಸಂದರ್ಭ ಸ್ಕಿಡ್ಡಾಗಿ ಬಿದ್ದ ಪರಿಣಾಮ ಅರವಿಂದ ಬೋಳಾರ್‌ ಅವರ ಕಾಲಿಗೆ ಏಟಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕಾಲಿಗೆ ಶಸ್ತ್ರಚಿಕಿತ್ಸೆ […]