ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್ 25 ರವರೆಗೆ ವಿಸ್ತರಣೆ: ತುರ್ತು ವಿಚಾರಣೆಗೆ ಸರ್ವೋಚ್ಛ ನ್ಯಾಯಾಲಯದಿಂದ ನಕಾರ
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಕೋರ್ಟ್ ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 25 ರವರೆಗೆ ವಿಸ್ತರಿಸಿದೆ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ (Delhi HC) ಪೀಠವು ಕೇಜ್ರಿವಾಲ್ ಅವರನ್ನು ಏಪ್ರಿಲ್ 23 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದೆ. ದೆಹಲಿ ನ್ಯಾಯಾಲಯದ ವಿಚಾರಣೆಗೆ ಕೆಲವೇ ಕ್ಷಣಗಳ ಮೊದಲು, ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ (Supreme Court) ಜಾರಿ ನಿರ್ದೇಶನಾಲಯಕ್ಕೆ (ED) […]
ಅಬಕಾರಿ ಹಗರಣ ಪ್ರಕರಣ: ತಿಹಾರ್ ಜೈಲು ನಂ 2 ರಲ್ಲಿ ಅರವಿಂದ್ ಕೇಜ್ರಿವಾಲ್; ಏ.15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ: ಅಬಕಾರಿ ಹಗರಣದಲ್ಲಿ ಇಡಿ ಸಂಸ್ಥೆಯಿಂದ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ವಿಚಾರಣಾಧೀನ ಕೈದಿಯಾಗಿ ತಿಹಾರ್ ಜೈಲು ನಂ. 2 ರಲ್ಲಿ ಏ.15 ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ನಂ. 1 ರಲ್ಲಿ, ಇತರ ಸಚಿವರು ಜೈಲು ಸಂಖ್ಯೆ 7 ರಲ್ಲಿ, ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಜೈಲು ಸಂಖ್ಯೆ 5 ರಲ್ಲಿ ಅದಾಗಲೇ ಬಂಧನದಲ್ಲಿದ್ದಾರೆ. ಈ ಮಧ್ಯೆ ಕೇಜ್ರಿವಾಲ್ ಐದು ಬೇಡಿಕೆಗಳನ್ನಿಟ್ಟಿದ್ದಾರೆ. […]
ಅಬಕಾರಿ ನೀತಿ ಹಗರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಜಾರಿ ನಿರ್ದೇಶನಾಲಯ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಕಾರ್ಯ ನಿರ್ವಹಿಸುತ್ತಿರುವಾಲೇ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂಗೆ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಕಳೆದ ಕೆಲವು ದಿನಗಳಿಂದ ಜಾರಿನಿರ್ದೇಶನಾಲಯವು ಬರೋಬ್ಬರಿ 9 ಸಮನ್ಸ್ […]
ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಅರವಿಂದ್ ಕೇಜ್ರಿವಾಲ್ ನಕಾರ
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ ಕೇಜ್ರಿವಾಲ್ ಇಡಿಗೆ ಪತ್ರ ಬರೆದಿದ್ದು, ತನಿಖಾ ಸಂಸ್ಥೆಯು ವಿಚಾರಣೆಗೆ ಕರೆದಿರುವ ತನ್ನ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಕರೆಸಿತ್ತು. […]
ದೆಹಲಿ ಮದ್ಯ ನೀತಿ ಪ್ರಕರಣ: ನ.2 ರಂದು ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ ಗೆ ಇಡಿ ಸಮನ್ಸ್
ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ED) ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕರೆಸಿದೆ. ನವೆಂಬರ್ 2 ರಂದು (ಗುರುವಾರ) ತನ್ನ ಮುಂದೆ ಹಾಜರಾಗುವಂತೆ ಹಣಕಾಸು ನಿಗಾ ಸಂಸ್ಥೆ ಅರವಿಂದ್ ಕೇಜ್ರಿವಾಲ್‌ಗೆ ತಿಳಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಕ್ಟೋಬರ್ 4 ರಂದು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ […]