ದೆಹಲಿ ಸರ್ಕಾರ ವರ್ಸಸ್ ಲೆಫ್ಟಿನೆಂಟ್ ಗವರ್ನರ್: ಕೇಂದ್ರ ಸರ್ಕಾರದಿಂದ ಸುಗ್ರೀವಾಜ್ಞೆ; ಶಾಶ್ವತ ಪ್ರಾಧಿಕಾರ ಅಸ್ತಿತ್ವಕ್ಕೆ
ನವದೆಹಲಿ: ವರ್ಗಾವಣೆ ಪೋಸ್ಟಿಂಗ್, ವಿಜಿಲೆನ್ಸ್ ಮತ್ತು ಇತರ ಪ್ರಾಸಂಗಿಕ ವಿಷಯಗಳಿಗೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸುಗಳನ್ನು ಮಾಡಲು ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ನ್ಯಾಶನಲ್ ಕ್ಯಾಪಿಟಲ್ ಸರ್ವಿಸ್ ಅಥಾರಿಟಿ ಅನ್ನು ಸ್ಥಾಪಿಸಿದೆ. ಕಳೆದ ವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಸೇರಿದಂತೆ ಸೇವಾ ವಿಷಯಗಳಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರವನ್ನು ಕಸಿದುಕೊಂಡು ದೆಹಲಿ ಸರ್ಕಾರಕ್ಕೆ ಕಾರ್ಯನಿರ್ವಾಹಕ ಅಧಿಕಾರವನ್ನು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ […]
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ಖರ್ಚು! ಕೊರೋನಾ ಸಂಕಷ್ಟ ಕಾಲದಲ್ಲಿ ದುಂದುವೆಚ್ಚ?
ಹೊಸದಿಲ್ಲಿ: ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಬಿಜೆಪಿ ಮಂಗಳವಾರ ಹೇಳಿಕೊಂಡಿದ್ದು, ‘ನೈತಿಕ’ ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ವರದಿಗಳ ಪ್ರಕಾರ ಅರವಿಂದ್ ಕೇಜ್ರಿವಾಲ್ ಅವರ ವಸತಿ ಗೃಹದ ನವೀಕರಣಕ್ಕೆ ರೂ 44.78 ಕೋಟಿ ಖರ್ಚು ಮಾಡಲಾಗಿದೆ. ಕೊರೋನಾ ಸಂಕಷ್ಟ ಕಾಲದಲ್ಲಿ ಆಮ್ಲಜನಕ ಟ್ಯಾಂಕರ್‌ಗಳನ್ನು ಖರೀದಿಸಲು ಹಣವಿಲ್ಲ ಎಂದಿದ್ದ ದೆಹಲಿ ಎಎಪಿ ಸರ್ಕಾರವು ತಲಾ 5 ಲಕ್ಷ ರೂಪಾಯಿ ಮೌಲ್ಯದ […]
ತಿಹಾರ್ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಫೂಟ್ ಮಸಾಜ್: ಸಿಸಿಟಿವಿ ದೃಶ್ಯಾವಳಿ ವೈರಲ್
ನವದೆಹಲಿ: ದೆಹಲಿಯ ಮಾಜಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ಅವರ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ತಿಹಾರ್ ಜೈಲಿನಲ್ಲಿ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿದ್ದಾರೆ. ವೈರಲ್ ಆಗಿರುವ ಈ ವೀಡಿಯೋದಲ್ಲಿ, ಜೈನ್ ತನ್ನ ಹಾಸಿಗೆಯ ಮೇಲೆ ಮಲಗಿ ಪೇಪರ್‌ಗಳನ್ನು ಓದುತ್ತಿದ್ದಾರೆ ಮತ್ತು ಅವರ ಪಕ್ಕದಲ್ಲಿ ಒಬ್ಬ ವ್ಯಕ್ತಿ ಅವರಿಗೆ ಫೂಟ್ ಮಸಾಜ್ ನೀಡುತ್ತಿದ್ದಾನೆ. ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿರುವುದನ್ನು ತೋರಿಸುವ ಸಿಸಿಟಿವಿ […]
ಪಾಲಿಗ್ರಾಫ್ ಪರೀಕ್ಷೆಗೆ ಸಿದ್ಧ ಎಂದ ಸುಕೇಶ್ ಚಂದ್ರಶೇಖರ್: ಸತ್ಯಪರೀಕ್ಷೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಕೇಜ್ರಿವಾಲ್ ಗೂ ಪಂಥಾಹ್ವಾನ
ನವದೆಹಲಿ: ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಶುಕ್ರವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿಕೆ ಸಕ್ಸೇನಾ ಅವರಿಗೆ ಬರೆದಿರುವ ಹೊಸ ಪತ್ರದಲ್ಲಿ, ತಮ್ಮ ಭ್ರಷ್ಟಾಚಾರದ ಆರೋಪಗಳನ್ನು ದೃಢೀಕರಿಸಲು ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಗೆ ನೀಡಿದ್ದಾರೆ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಕೂಡಾ ತನ್ನ ಜೊತೆ ಪರೀಕ್ಷೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. “ಕೇಜ್ರಿವಾಲ್ ಜಿ, ಸುಳ್ಳು ಎಂದು ಅಳುವ ಬದಲು, ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಕೊಳ್ಳಲು ಎದೆಗಾರಿಕೆ ಮತ್ತು […]