ಕಾಂತಾರ ಖ್ಯಾತಿಯ ನಟಿಯ ‘ಜುಗಲ್ ಬಂದಿ’ ಟ್ರೇಲರ್ ರಿಲೀಸ್
ಹೊಸಬರ ವಿನೂತನ ಪ್ರಯತ್ನವಿರುವ ‘ಜುಗಲ್ ಬಂದಿ’ (Jugal Bandi) ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ದಿವಾಕರ ಡಿಂಡಿಮ (Diwakar Dindama) ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಫಸ್ಟ್ ಲುಕ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಹೆಜ್ಜೆ ಇಡಲಿದ್ದು, ಅದಕ್ಕೂ ಮುನ್ನ ಟ್ರೇಲರ್ ಮೂಲಕ ಸಿನಿಮಾಗೆ ಆಮಂತ್ರಣ ನೀಡಿದೆ ಚಿತ್ರತಂಡ. ಡಿಂಡಿಮ ಪ್ರೊಡಕ್ಷನ್ಸ್ ನಡಿ ನಿರ್ಮಾಣವಾದ ಈ ಚಿತ್ರ ಹಲವು ಕಥೆಗಳ ಜುಗಲ್ ಬಂದಿ. […]