ಭಾರತೀಯ ಸೇನೆಯನ್ನು ಸೇರಿಕೊಂಡ ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ ತಯಾರಿಸಿದ ಪ್ರಪ್ರಥಮ ಶಸ್ತ್ರಸಜ್ಜಿತ ಲಘು ವಿಶೇಷ ವಾಹನ: ಆರ್ಮಡೋ

ಹೊಸದಿಲ್ಲಿ: ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ (MDS) ಭಾರತೀಯ ಸಶಸ್ತ್ರ ಪಡೆಗಳಿಗಾಗಿ ವಿಶೇಷವಾಗಿ ನಿರ್ಮಿಸಲಾದ ಭಾರತದ ಪ್ರಪ್ರಥಮ ಆರ್ಮರ್ಡ್ ಲೈಟ್ ಸ್ಪೆಷಲಿಸ್ಟ್ ವೆಹಿಕಲ್ (ALSV) ‘ಆರ್ಮಡೋ’ ವಿತರಣೆಯನ್ನು ಪ್ರಾರಂಭಿಸಿದೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಘೋಷಿಸಿದ್ದಾರೆ. MDS ಮಹೀಂದ್ರಾ ಗ್ರೂಪ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಹೊಸ ವಾಹನವನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ ಮತ್ತು ತಯಾರಿಸಲಾಗಿದೆ ಎಂದು ಆನಂದ್ ಮಹೀಂದ್ರಾ ಟ್ವೀಟ್ ಮಾಡಿ ತಿಳಿಸಿದ್ದಾರೆ. ಆರ್ಮಡೊ ಒಂದು ಲಘು ಶಸ್ತ್ರಸಜ್ಜಿತ ವಿಶೇಷ ವಾಹನವಾಗಿದ್ದು, ರಕ್ಷಣಾ ಪಡೆಗಳ ಬಳಕೆಗಾಗಿ ನಿರ್ಮಿಸಲಾಗಿದೆ. […]