ಮಳೆಯನ್ನೂ ಲೆಕ್ಕಿಸದೆ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು: ಅರ್ಹತೆಗಳಿಸಲು ವಿಫಲರಾದವರಿಂದ ರೋದನ!!
ಉಡುಪಿ : ಸೋಮವಾರದಂದು ಅಜ್ಜರ ಕಾಡು ಮೈದಾನದಲ್ಲಿ ನಡೆದ ರ‍್ಯಾಲಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 41, ಉಡುಪಿಯ 59, ದ.ಕನ್ನಡದ 88, ದಾವಣಗೆರೆಯ 91, ಶಿವಮೊಗ್ಗದ 92 ಹಾಗೂ ಹಾವೇರಿ ಜಿಲ್ಲೆಯ 294 ಸೇರಿದಂತೆ ಒಟ್ಟು 665 ಅಭ್ಯರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 6.30 ರಿಂದ ನಡೆದ ಓಟದ ಸ್ಪರ್ಧೆಯಲ್ಲಿ ಅಭ್ಯರ್ಥಿಗಳನ್ನು ತಲಾ 100 ಜನರಂತೆ ತಂಡಗಳಾಗಿ ವಿಂಗಡಿಸಲಾಗಿದ್ದು, ನಿಗದಿತ ದೂರ 1600 ಮೀ. (ಕ್ರೀಡಾಂಗಣದ 4 ಸುತ್ತು) ನ್ನು 5.30 ನಿಮಿಷದೊಳಗೆ ಪೂರ್ಣಗೊಳಿಸಿದವರನ್ನು ಮತ್ತು 5.30 ರಿಂದ 5.45 […]