ನೆನಪಿನ ಕ್ವಾರಂಟೈನ್ ನಲ್ಲಿ ಬಂಧಿಯಾಗಿದ್ದಾಳೆ ಆ ಕಪ್ಪು ಬುರ್ಖಾ ಸುಂದರಿ

ಆವತ್ತು ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಫಲಿತಾಂಶವೂ ಬಂದಾಗಿತ್ತು. ನಾನು ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆದೆ. ಮುಂದೆ ಪದವಿಗೆ ಸೇರ್ಪಡೆಯಾಗಲು ಕಾರ್ಕಳದ ಕಾಲೇಜ್ ಗೆ ಬಂದೆ. ಅಡ್ಮಿಸನ್ ಫಾರ್ಮ್ ತೆಗೆದುಕೊಳ್ಳುವಾಗ ನನ್ನನ್ನು ಸೆಳೆದಿದ್ದು ಆ ಕಣ್ಣುಗಳು. ಆ ಕಣ್ಣುಗಳನ್ನು ನೋಡಿ ಒಂದು ಕ್ಷಣ ಕಳೆದುಹೋದೆ. ಯಾರಪ್ಪ ಈ ಸುಂದರಿ ಎಂದು ನನ್ನಲ್ಲೆ ನಾನು ಕೇಳಿಕೊಂಡೆ. ಅವಳು ಬುರ್ಖಾ ತೊಟ್ಟಿದರಿಂದ ಅವಳ‌ ಮುಖ ನೋಡಲು ಸಾಧ್ಯವಾಗಲಿಲ್ಲ. ಆದರೆ ಅವಳ ಕಣ್ಣುಗಳು ನನ್ನ ಮನಸ್ಸಿನಲ್ಲಿ ಹಚ್ಚೆ ಹಾಕಿದವು.  ಮೊದಲ […]