ಕಲಾವಿದರ ದತ್ತಾಂಶ ಸಂಗ್ರಹ: ಅವಧಿ ವಿಸ್ತರಣೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯಡಿ ಸಾಹಿತಿ ಹಾಗೂ ಕಲಾವಿದರುಗಳು ಸೇವಾಸಿಂಧು ಪೋರ್ಟಲ್. www.sevasindhu.karnataka.gov.in ರಲ್ಲಿ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳುವ ಅವಧಿಯನ್ನು ಮೇ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ 0820-2986168 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.