ಗಡಿಯಲ್ಲಿ ಚೀನಾ ದಾರ್ಷ್ಟ್ಯ ಪ್ರದರ್ಶನ: ಮೊತ್ತೊಮ್ಮೆ ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ
ಗುವಾಹಟಿ: ಅರುಣಾಚಲ ಪ್ರದೇಶದ ಮೇಲಿನ ತನ್ನ ಹಕ್ಕನ್ನು ಮತ್ತೊಮ್ಮೆ ಒತ್ತಿಹೇಳುವ ಪ್ರಯತ್ನದ ಭಾಗವಾಗಿ ಚೀನಾವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಹೊಸ ಹೆಸರುಗಳನ್ನು ಬಿಡುಗಡೆ ಮಾಡಿದೆ. ಇದೀಗ ಮೂರನೇ ಬಾರಿಗೆ ಚೀನಾವು ಅರುಣಾಚಲ ಪ್ರದೇಶದ ಸ್ಥಳಗಳಿಗೆ ‘ಮರುನಾಮಕರಣ’ ಮಾಡಿದ್ದು, ಅದನ್ನು “ಜಂಗ್ನಾನ್, ಟಿಬೆಟ್‌ನ ದಕ್ಷಿಣ ಭಾಗ” ಎಂದು ಕರೆದಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ನಿನ್ನೆ ಚೀನಾದ ಕ್ಯಾಬಿನೆಟ್, ಸ್ಟೇಟ್ ಕೌನ್ಸಿಲ್ ನೀಡಿದ ಭೌಗೋಳಿಕ ಹೆಸರುಗಳ ಮೇಲಿನ ನಿಯಮಗಳಿಗೆ ಅನುಸಾರವಾಗಿ ಚೀನಾ, ಟಿಬೆಟ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ […]