ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಅರುಣ್ ಆಚಾರಿ ದೋಷಿ

ಉಡುಪಿ: ಕಳೆದ ಮೂರು ವರ್ಷಗಳ ಹಿಂದೆ ಮಣಿಪಾಲದ ಪೆರಂಪಳ್ಳಿ ಎಂಬಲ್ಲಿ ನಡೆದ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಆರೋಪಿ ಪೆರಂಪಳ್ಳಿ ನಿವಾಸಿ ಅರುಣ್‌ ಆಚಾರಿ(32) ಎಂಬಾತನನ್ನು ದೋಷಿ ಎಂದು ಬುಧವಾರ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್‌ 12ರಂದು ಪ್ರಕಟಿಸಲಿದೆ. ಆರೋಪಿ ಅರುಣ್ 2016ರ ಜುಲೈ 16ರಂದು ಬೆಳಿಗ್ಗೆ 9ಗಂಟೆ ಸುಮಾರಿಗೆ ಬಾಲಕಿ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಆಕೆಗೆ ಮದುವೆಯಾಗುತ್ತೇನೆಂದು ಆಸೆ ತೋರಿಸಿ ತನ್ನ ಬೈಕಿನಲ್ಲಿ ಕೂರಿಸಿಕೊಂಡು ಮಣಿಪಾಲದ ಎರಡು […]