ನಿರ್ದೇಶಕ ಅರವಿಂದ್ ಕೌಶಿಕ್: ‘ಅರ್ಧಂಬರ್ಧ ಪ್ರೇಮಕಥೆ’ ಯುವ ಪೀಳಿಗೆಯನ್ನ ಸೆಳೆಯೋ ಚಿತ್ರಕಥೆ

ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರೋ ಈ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಪ್ರಿಯರು ಟ್ರೈಲರ್​​ಗೆ ಮೆಚ್ಚುಗೆ ಸೂಚಿಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಈ ಚಿತ್ರದಲ್ಲಿ ಯುವ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.ಕನ್ನಡ ಚಿತ್ರರಂಗದ ತುಘಲಕ್ ಸಿನಿಮಾ ಖ್ಯಾತಿಯ ಅರವಿಂದ್ ಕೌಶಿಕ್ ನಿರ್ದೇಶನದ ಮತ್ತೊಂದು ಪ್ರೇಮ್‌ ಕಹಾನಿ ‘ಅರ್ಧಂಬರ್ಧ ಪ್ರೇಮಕಥೆ’.ಇತ್ತೀಚೆಗೆ ಚಿತ್ರದ ಟ್ರೈಲರ್​ ರಿಲೀಸ್​ ಆಗಿದ್ದು, ‘ಅರ್ಧಂಬರ್ಧ ಪ್ರೇಮಕಥೆ’ಯ ಕಿರುನೋಟವನ್ನು ಸಿನಿಪ್ರಿಯರು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಟ್ರೈಲರ್​ ರಿಲೀಸ್​ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಅರವಿಂದ್ ಕೌಶಿಕ್, […]