ಉಡುಪಿಯಲ್ಲಿ ಶೇ.100ರಷ್ಟು ವಿದ್ಯುತ್ ಸಂಪರ್ಕದ ಗುರಿ: ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿದ್ಯುತ್ ಸಂಪರ್ಕ ಅಭಿಯಾನ

ಉಡುಪಿ: ಆಸರೆ ಚಾರಿಟೇಬಲ್ ಟ್ರಸ್ಟ್(ರಿ) ಕಡಿಯಾಳಿ ವತಿಯಿಂದ ಜೂ. 27ರಂದು ಉಡುಪಿ ನಗರದ ಸುಬ್ರಹ್ಮಣ್ಯ ನಗರದಲ್ಲಿ 3 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಒದಗಿಸಲಾಯಿತು. ಫಲಾನುಭವಿಗಳಾದ ಅಮಿತ, ಶೀಲಾ ಹಾಗೂ ಸದಾಶಿವ ಇವರ ಮನೆಗೆ ದಾನಿಗಳಾದ ಖ್ಯಾತಿ ಭಟ್ ಮತ್ತು ಸ್ತುತಿ ಭಟ್, ಮಂಜುಳಾ ಶೆಣೈ ವಿದ್ಯುತ್ ಸಂಪರ್ಕ ಒದಗಿಸಿರುತ್ತಾರೆ. ನಗರಸಭೆ ಸ್ಥಾಯಿ ಸಮಿತಿ ಸದಸ್ಯ ಶ್ರೀಶ ಕೊಡವೂರು, ಶೀಲಾ ಅವರ ಮನೆಯ  ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡಿದರು. ಶೀಲಾ ಅವರ ಮನೆಗೆ ಉಚಿತ ವಿದ್ಯುತ್ ಸೌಲಭ್ಯ […]

ಬೆಳಕಿನ ಹಬ್ಬದಂದು ಕತ್ತಲೆಯಲ್ಲಿದ್ದ ಮನೆಗಳಿಗೆ ಆಸರೆಯಾದ ಶಾಸಕ ರಘುಪತಿ ಭಟ್

ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ದಿನದಂದು ಉಡುಪಿ ನಗರದಲ್ಲಿ ಒಟ್ಟು 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಸರಳಬೆಟ್ಟು ವಾರ್ಡಿನ ಕೊರಗರ ಕಾಲೋನಿಯ 3 ಮನೆಗಳ ವಿದ್ಯುತ್ ಸಂಪರ್ಕಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ರವಿರಾಜ್ […]