ಕೋವಿಡ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಎಲ್ಲರಿಗೂ ಮಾದರಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಮಾ.15: ಕೋವಿಡ್ ಸೇರಿದಂತೆ ಇತರೆ ತುರ್ತು ಸಂದರ್ಭಗಳಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತದೊಂದಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಅವರ ಕಾರ್ಯ ಇತರೆ ಎಲ್ಲರಿಗೂ ಮಾದರಿ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು. ಅವರು ಇಂದು ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕೋವಿಡ್ ಸೋಂಕಿನ ಮೂರು ಅಲೆಗಳ ಸಂದರ್ಭದಲ್ಲಿಯೂ […]