ಬಿಜೆಪಿ ಸರಕಾರದ ಸಾಧನೆ ಶೂನ್ಯ: ಅಶೋಕ್ ಕುಮಾರ್ ಕೊಡವೂರು

ಉಡುಪಿ: ಮನಮೋಹನ್ ಸಿಂಗ್ ಸರಕಾರ ಏನು ಮಾಡಿದೆ ಎನ್ನುವ ಶೋಭಾ ಕರಂದ್ಲಾಜೆ ಅವರು ಕಳೆದ ಐದು ವರ್ಷದಲ್ಲಿ ಮೋದಿ ಮಾಡಿದ ಸಾಧನೆ ಏನೆಂದು ತಿಳಿಸಬೇಕು. ಆಧಾರ್, ಐಎಫ್‍ಡಿ ಹೂಡಿಕೆ, ನಿರ್ಮಲ್ ಭಾರತ್(ಸ್ವಚ್ಚ ಭಾರತ), ಜಿ.ಎಸ್.ಟಿ. ಯಂತಹ ಯುಪಿಎ ಸರಕಾರದ ಯೋಜನೆಗಳನ್ನು ಅಂದು ವಿರೋಧಿಸಿ ಇಂದು ಕಾರ್ಯಗತಗೊಳಿಸಿದೆ. ಬಿಜೆಪಿಯ ಈ ನಿರ್ಧಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳಲು ಬಿಜೆಪಿ ಕಾರಣಕರ್ತವಾಗಿದೆ. ಇದನ್ನು ಬಿಜೆಪಿ ಸಾಧನೆ ಎನ್ನಬೇಕೇ? ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ. ಈ ಬಾರಿ […]