ಮಕ್ಕಳ ಶಿಕ್ಷಣದ ಬೆಳವಣಿಗೆಗೆ ಶೇ.೬೦ ರಷ್ಟು ಶಿಕ್ಷಕರ ಸಹಾಯಬೇಕು. ಉಳಿದ ಶೇ.೪೦ ಮಕ್ಕಳ ತಂದೆತಾಯಿಯ ಜವಾಬ್ದಾರಿಯಾಗಿದೆ: ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಅವಿಭಜಿತ ಪುತ್ತೂರು ತಾಲೂಕಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರ ಕೊರತೆಯಾಗಲಾರದು. ಈಗಾಗಲೇ ನೇರನೇಮಕಾತಿ ಮೂಲಕ ೧೩೦ ಶಿಕ್ಷಕರು ಹಾಗೂ ೧೮೦ ಅತಿಥಿ ಶಿಕ್ಷಕರು ನೇಮಕಗೊಳ್ಳಲಿದ್ದಾರೆ ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಬುಧವಾರ ಹಾರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕುಮಟ್ಟದ ಶಾಲಾ ಪ್ರಾರಂಬೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಶಿಕ್ಷಣದ ಬೆಳವಣಿಗೆಗೆ ಶೇ.೬೦ ರಷ್ಟು ಶಿಕ್ಷಕರ ಸಹಾಯಬೇಕು. ಉಳಿದ ಶೇ.೪೦ ಮಕ್ಕಳ ತಂದೆತಾಯಿಯ ಜವಾಬ್ದಾರಿಯಾಗಿದೆ. ಈ ಎರಡೂ ವಿಚಾರಗಳು ಸಾಧ್ಯವಾದರೆ ಶಿಕ್ಷಣದಲ್ಲಿ ಪ್ರಗತಿ ಸಾಧ್ಯವಾಗುತ್ತದೆ. […]