ಇಂದಿನಿಂದ ರಸ್ತೆಗಳಲ್ಲಿ ಓಡಾಡಲಿದೆ ಕ.ರಾ. ರ.ಸಾ.ಸಂಸ್ಥೆಯ ಅಶ್ವಮೇಧ ಕ್ಲಾಸಿಕ್ ಹೈ ಟೆಕ್ ಬಸ್ಸುಗಳು

ಬೆಂಗಳೂರು: ಇಂದಿನಿಂದ ರಾಜ್ಯದ ರಸ್ತೆಗಳಲ್ಲಿ ನೂತನ 100 ಅಶ್ವಮೇಧ ಕ್ಲಾಸಿಕ್ (Ashvamedha Classic) ಬಸ್‌ಗಳು ಕಾರ್ಯಾರಂಭ ಮಾಡಲಿದ್ದು, ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ಬಸ್‌ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಅಶ್ವಮೇಧ ಬಸ್‌ಗಳು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಒಟ್ಟು 800 ಬಸ್‌ಗಳ ಪೈಕಿ ಇಂದು 100 ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಂದಿನ ಹಂತದಲ್ಲಿ ಇನ್ನುಳಿದ ಬಸ್‌ಗಳು ಸೇರ್ಪಡೆಗೊಳ್ಳಲಿವೆ. […]