ಸ್ಟೀಲ್ ಬ್ರಿಡ್ಜ್ ಗರ್ಡರ್ ಗೆ ಡಿ.ಆರ್.ಡಿ.ಓ ಅಂಗೀಕಾರ: ಇಂದ್ರಾಳಿ ರೈಲ್ವೆ ಮೇಲ್ಸೆತುವ ಕಾಮಗಾರಿಗೆ ವೇಗ

ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗಾಗಿ ಹುಬ್ಬಳ್ಳಿಯಲ್ಲಿ ನಿರ್ಮಾಣಗೊಂಡಿರುವ ಸ್ಟೀಲ್ ಬ್ರಿಡ್ಜ್ ಗರ್ಡರ್ ರೈಲ್ವೇ ಇಲಾಖೆಯ ಡಿಆರ್ ಡಿಒ ಪರಿಶೀಲನೆಯಿಂದ ಅಂಗೀಕೃತವಾಗಿ ಉಡುಪಿಗೆ ಆಗಮಿಸಲಿದೆ. ಉಡುಪಿ ಜನತೆಯ ಬಹು ದಿನದ ಬೇಡಿಕೆಯಾಗಿರುವ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಸಹಕರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸ್ಥಳೀಯ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ಯಶ್ ಪಾಲ್ ಸುವರ್ಣ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ತಿರುವನಂತರಪುರ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ

ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲನ್ನು ಮಂಗಳೂರಿನವರೆಗೆ (Mangaluru) ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ. ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರದ ಆರು ದಿನಗಳೂ ಈ ರೈಲು ಸಂಚರಿಸಲಿದೆ. “ನನ್ನ ಕೋರಿಕೆಯನ್ನು ಪುರಸ್ಕರಿಸಿ […]

ಆಂಧ್ರಪ್ರದೇಶದ ಹೌರಾ-ಚೆನ್ನೈ ಮಾರ್ಗದಲ್ಲಿ ರೈಲುಗಳ ಮಧ್ಯೆ ಡಿಕ್ಕಿ: 13 ಸಾವು; 50 ಜನರಿಗೆ ಗಾಯ

ಅಮರಾವತಿ: ಒಡಿಶಾದಲ್ಲಿ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಮೂರು ರೈಲುಗಳ ಭೀಕರ ಡಿಕ್ಕಿ ನಡೆದ ತಿಂಗಳುಗಳ ಬಳಿಕ ಭಾನುವಾರದಂದು ಆಂಧ್ರಪ್ರದೇಶದ ಹೌರಾ-ಚೆನ್ನೈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಿಗ್ನಲ್ ಅನ್ನು ದಾಟಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 13 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ. ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದು, ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು […]

ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಹೈದರಾಬಾದ್-ಬೆಂಗಳೂರು ಮಾರ್ಗಕ್ಕೂ ರೈಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ರೈಲುಗಳ ಪ್ರಾರಂಭವು 11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಇವು ವಂದೇ ಭಾರತ್ ರೈಲುಗಳ ಪ್ರಾರಂಭದಿಂದ ಪ್ರಯೋಜನ ಪಡೆಯುವ ರಾಜ್ಯಗಳು. ಈ ವಂದೇ […]

ಕರಾವಳಿ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದೊಳಗೆ ಬರಲಿದೆ ವಂದೇ ಭಾರತ್ ಎಕ್ಸ್ ಪ್ರೆಸ್? ಸಂಸದರಿಗೆ ರೈಲ್ವೆ ಸಚಿವರ ಭರವಸೆ

ಉಡುಪಿ/ಮಂಗಳೂರು: ಕರಾವಳಿಯ ಜನರ ಬಹುದಿನದ ಬೇಡಿಕೆ ವಂದೇ ಭಾರತ್ ಎಕ್ಸ್ ಪ್ರೆಸ್ ಸೌಲಭ್ಯ. ಹಲವಾರು ತಾಂತ್ರಿಕ ಕಾರಣಗಳಿಂದ ಕರಾವಳಿಯ ಅವಳಿ ಜಿಲ್ಲೆಗಳಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ನ ಸೌಕರ್ಯ ಲಭಿಸಿಲ್ಲ. ಆದರೆ ಇದೀಗ ಮಂಗಳೂರು ಮತ್ತು ಮಡ್ ಗಾಂವ್(ಗೋವಾ) ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಓಡುವ ನಿರೀಕ್ಷೆ ಇದೆ ಎಂದು ದ ಹಿಂದು ವರದಿ ಹೇಳಿದೆ. ಈ ಬಗ್ಗೆ ದ.ಕ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ […]