ಒಡಿಶಾ ತ್ರಿವಳಿ ರೈಲು ದುರಂತ: ಸಿಬಿಐ ವಿಚಾರಣೆ ಬಳಿಕ ಕುಟುಂಬ ಸಮೇತ ನಾಪತ್ತೆಯಾದ ಸಿಗ್ನಲ್ ಜೂನಿಯರ್ ಎಂಜಿನಿಯರ್
ಭುವನೇಶ್ವರ: 289 ಮಂದಿ ಪ್ರಾಣ ಕಳೆದುಕೊಂಡ ಒಡಿಶಾ ತ್ರಿವಳಿ ರೈಲು ದುರಂತದ ತನಿಖೆಯನ್ನು ಮುಂದುವರೆಸಿರುವ ಸಿಬಿಐ, ಸೊರೊ ಸೆಕ್ಷನ್ ಸಿಗ್ನಲ್ ಜೂನಿಯರ್ ಇಂಜಿನಿಯರ್ (ಜೆಇ) ಬಾಡಿಗೆ ಮನೆಯನ್ನು ಸೋಮವಾರ ಸೀಲ್ ಮಾಡಿದೆ. ಇಂಡೋ-ಏಷ್ಯನ್ ನ್ಯೂಸ್ ಸರ್ವಿಸ್ ವರದಿ ಪ್ರಕಾರ, ಅಮೀರ್ ಖಾನ್ ಎಂಬ ಜೆಇಯನ್ನು ಆರಂಭದಲ್ಲಿ ಸಿಬಿಐ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿದೆ. ಏಜೆನ್ಸಿ ಅಧಿಕಾರಿಗಳು ಸೋಮವಾರ ಸೊರೊದಲ್ಲಿರುವ ಖಾನ್ ವಾಸವಾಗಿದ್ದ ಬಾಡಿಗೆ ಮನೆಗೆ ತಲುಪಿದಾಗ ಮನೆಗೆ ಬೀಗ ಹಾಕಲ್ಪಟ್ಟಿದೆ ಮತ್ತು ಆತನ ಇಡೀ ಕುಟುಂಬ ನಾಪತ್ತೆಯಾಗಿದೆ. […]
ಒಡಿಶಾ ರೈಲು ದುರ್ಘಟನೆ: ಸಂತ್ರಸ್ತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ಭರವಸೆ
ಭುವನೇಶ್ವರ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಳಗಾದವರನ್ನು ಶನಿವಾರ ಭೇಟಿ ಮಾಡಿದ ಪ್ರಧಾನಿ ಮೋದಿ, ಸಂತ್ರಸ್ತ ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಚಿಕಿತ್ಸೆ ನೀಡಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದರು. “ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಅವರು ಹೇಳಿದರು. ದುರಂತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸರಕಾರ ಬೆಂಬಲವಾಗಿ ನಿಂತಿದೆ ಎಂದು ಅವರು ಭರವಸೆ ನೀಡಿದರು. ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ […]
ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿದ ರೈಲ್ವೆ ಇಲಾಖೆ: ವಿಭಿನ್ನ ರೈಲುಗಳಿಗೆ ನಿಲುಗಡೆ ನೀಡಿ ಆದೇಶ
ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬಹುದಿನದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ಈ ಕೆಳಗಿನ ರೈಲುಗಳ ನಿಲುಗಡೆಗೆ ಬಹುದಿನಗಳಿಂದ ಜನರ ಬೇಡಿಕೆಯಿದ್ದು ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರದ ರೈಲ್ವೆ ಸಚಿವರಿಗೆ ಪತ್ರ ಬರೆದು ಸಭೆ ನಡೆಸಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಕೆಳಗಿನ ರೈಲುಗಳಿಗೆ ಕೆಳಕಂಡ […]
ಸರ್ಕಾರಿ ಧೋರಣೆ ಬಿಟ್ಟು ಕೆಲಸ ಮಾಡಿ ಅಥವಾ ಗಂಟುಮೂಟೆ ಕಟ್ಟಿ: ಬಿಎಸ್‌ಎನ್‌ಎಲ್ ಉದ್ಯೋಗಿಗಳಿಗೆ ಸಚಿವ ವೈಷ್ಣವ್ ಖಡಕ್ ಎಚ್ಚರಿಕೆ
ನವದೆಹಲಿ: ಸಂಕಷ್ಟದಲ್ಲಿರುವ ಟೆಲಿಕಾಂ ಪಿಎಸ್‌ಯುವಾದ ಬಿಎಸ್‌ಎನ್‌ಎಲ್‌ನ ಉದ್ಯೋಗಿಗಳಿಗೆ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉದ್ಯೋಗಿಗಳು ತಮ್ಮ ‘ಸರ್ಕಾರಿ’ ಧೋರಣೆಯನ್ನು ತ್ಯಜಿಸುವಂತೆ ಹೇಳಿದ ಅವರು, ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸದವರಿಗೆ ಕಡ್ಡಾಯ ನಿವೃತ್ತಿ ನೀಡಲಾಗುತ್ತದೆ ಮತ್ತು ಗಂಟು ಮೂಟೆ ಕಟ್ಟಿ ಮನೆಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ. ಎಂಟಿಎನ್‌ಎಲ್‌ಗೆ ‘ಭವಿಷ್ಯವಿಲ್ಲ’ ಹಾಗಾಗಿ ನಾವು ಅಲ್ಲಿ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ. ಎಂಟಿಎನ್‌ಎಲ್ ನ ನಿರ್ಬಂಧಗಳು ಮತ್ತು ಅದು ಯಾವ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿ ವಿಭಿನ್ನ ಕಸರತ್ತು […]