ಏಷ್ಯಾಕಪ್ 2023: ಟಾಸ್ ಗೆದ್ದ ಭಾರತ; ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ
2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟೀಂ ಇಂಡಿಯಾ ಟಾಸ್ ಗೆದ್ದಿದ್ದು ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. 4 ವರ್ಷಗಳ ಬಳಿಕ ಇತ್ತಂಡಗಳು ಏಕದಿನ ಕ್ರಿಕೆಟ್ ನಲ್ಲಿ ಮುಖಾಮುಖಿಯಾಗಿವೆ. 2019ರ ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ತಂಡಗಳು ಎದುರುಬದುರಾಗಿದ್ದವು. ಭಾರತ ತಂಡವು ಮೂರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಭಾರತದ […]