ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಬೆಂಗಳೂರು: ವಿಧಾನ ಮಂಡಲದ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿ ನಿರ್ಗಮಿಸಿದ ನಂತರ ಸದನವು ವಂದೇ ಮಾತರಂ ಗೀತೆ ನಡೆಸುವುದರೊಂದಿಗೆ ಸದನ ಮತ್ತೆ ಸಮಾವೇಶಗೊಂಡ ವೇಳೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು, ಅಗಲಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿದರು. ಮಾಜಿ ಶಾಸಕ, ಮಾಜಿ ಉಪಾಧ್ಯಕ್ಷ ಅಂಜನಾಮೂರ್ತಿ, ಮಾಜಿ ಸಂಸದ ಆರ್. ಧ್ರುವನಾರಾಯಣ, ಮಾಜಿ ಸಚಿವ ಡಿ.ಬಿ. ಇನಾಂದಾರ್, ಮಾಜಿ ಶಾಸಕ ಯು.ಆರ್. ಸಭಾಪತಿ, ಡಾ. ಕೆ. ಭುಜಂಗಶೆಟ್ಟಿ ಸೇರಿದಂತೆ ಇತ್ತೀಚೆಗೆ ಅಗಲಿದ ಎಂಟು ಮಂದಿ […]