ಪತ್ರಕರ್ತೆ ಹರ್ಷಿಣಿ ಬ್ರಹ್ಮಾವರ ಇವರಿಗೆ ಬೀಳ್ಕೊಡುಗೆ
ಉಡುಪಿ: ಕಳೆದ ಎಂಟು ವರ್ಷಗಳ ಕಾಲ ಉಡುಪಿಯಲ್ಲಿ ಡೈಜಿ ವರ್ಲ್ಡ್ ಸಂಸ್ಥೆಯ ವರದಿಗಾರ್ತಿಯಾಗಿ ಕೆಲಸ ಮಾಡಿಕೊಂಡಿದ್ದ ಹರ್ಷಿಣಿ ಬ್ರಹ್ಮಾವರ ಅವರ ಬೀಳ್ಕೊಡುಗೆ ಸಮಾರಂಭವನ್ನು ಉಡುಪಿಯ ಬ್ರಹ್ಮಗಿರಿಯ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆಯಲ್ಲಿ ಹಿರಿಯ ಪತ್ರಕರ್ತ ಬಿ.ಬಿ. ಶೆಟ್ಟಿಗಾರ್ ಹರ್ಷಿಣಿ ಅವರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಪದವಿಯ ನಂತರ ಉಡುಪಿಯ ಜಿ.ಶಂಕರ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಹರ್ಷಿಣಿ ಬ್ರಹ್ಮಾವರ, ಮಾಧ್ಯಮ ಕ್ಷೇತ್ರದ ಮೇಲಿನ ಅತೀವ […]
ಉಡುಪಿ ಜಿಲ್ಲೆಯ ಪ್ರಪಥಮ ಉಸ್ತುವಾರಿ ಸಚಿವನಾದದ್ದು ಹೆಮ್ಮೆಯ ವಿಚಾರ: ಕೆ.ಜಯಪ್ರಕಾಶ್ ಹೆಗ್ಡೆ
ಉಡುಪಿ: 1997 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರ್ಪಟ್ಟು ಸ್ವತಂತ್ರ ಜಿಲ್ಲೆಯಾಗಿ ಮಾರ್ಪಟ್ಟ ಉಡುಪಿ ಜಿಲ್ಲೆಯ ಪ್ರಪಥಮ ಉಸ್ತುವಾರಿ ಸಚಿವನಾದದ್ದು ನನಗೆ ಹೆಮ್ಮೆ ನೀಡುವ ವಿಷಯ. ಅಂದಿನಿಂದ ಇಂದಿನವರೆಗೆ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿಪರ ಚಟುವಟಿಕೆಗಳು ನಡೆದಿದ್ದು, ಮುಂದೆಯೂ ಕೂಡ ಅನೇಕ ಅಭಿವೃದ್ಧಿ ಕೆಲಸಗಳು ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಮಂಗಳವಾರ ನಗರದ ಐ.ಎಮ್.ಎ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ […]