ಅಟಲ್ ಬಿಹಾರಿ ವಾಜಪೇಯಿ ಅವರ ನೆನಪಿಗೆ ₹100 ಮುಖಬೆಲೆಯ ನಾಣ್ಯ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ವಿಶೇಷ ನಾಣ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಡಿ.24ರಂದು ಬಿಡುಗಡೆ ಮಾಡಲಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ, ಸಂಸತ್ತಿನಲ್ಲಿ ಶೀಘ್ರ ವಾಜಪೇಯಿ ಅವರ ಪ್ರತಿಮೆ ಸ್ಥಾಪಿಸಲು ಸಂಸದೀಯ ಸಮಿತಿ ಒಪ್ಪಿಕೊಂಡಿದೆ. ₹100 ಮೌಲ್ಯದ ಈ ನಾಣ್ಯವು 35 ಗ್ರಾಂ ತೂಕವಿರುತ್ತದೆ. ನಾಣ್ಯದ ಒಂದು ಬದಿಯಲ್ಲಿ ವಾಜಪೇಯಿ ಅವರ ಭಾವಚಿತ್ರವಿದ್ದು ದೇವನಾಗರಿ ಲಿಪಿಯಲ್ಲಿ ಅವರ ಹೆಸರಿರುತ್ತದೆ. ಭಾವಚಿತ್ರದ ಕೆಳಗೆ ಜನನ–ಮರಣದ ಇಸವಿ ಇರಲಿದೆ ಹಾಗೂ ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ವಾಜಪೇಯಿ ಅವರ ಪುತ್ಥಳಿ […]