ಅಟಲ್ ಉತ್ಸವ: ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನುಡಿಯಾದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ
ಉಡುಪಿ: ಬಿಜೆಪಿಯ ವಿಧಾನಸಭಾ ಚುನಾವಣೆಯ ಮುನ್ನುಡಿಯಾಗಿ ನಗರದ ಎಂಜಿಎಂ ಕಾಲೇಜು ಮೈದಾನದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದ ಅಂಗವಾಗಿ ಅಟಲ್ ಉತ್ಸವ ಆಯೋಜಿಸಲಾಗಿದ್ದು ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ ಭಾನುವಾರ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ‘ಬೂತ್ ಸಂಗಮ’ದಲ್ಲಿ ನಗರ ಮತ್ತು ಗ್ರಾಮಾಂತರ ಭಾಗದ 226 ಮತಗಟ್ಟೆಗಳಿಂದಲೂ ಕಾರ್ಯಕರ್ತರು ಭಾಗವಹಿಸಿ ಇತಿಹಾಸ ನಿರ್ಮಿಸಿದರು. ಮುಂಬರುವ ವಿಧಾನಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮಂಥನ ನಡೆಸಲಾಯಿತು. […]
ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಖ್ಯಾತ ಗಾಯಕ ವಿಜಯ್ ಪ್ರಕಾಶ್
ಉಡುಪಿ: ಕರ್ನಾಟಕದ ಖ್ಯಾತ ಸಂಗೀತಗಾರ ವಿದ್ವಾನ್ ವಿಜಯಪ್ರಕಾಶ್ ರವರು ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ನಾರಾಯಣ ಸರಳಾಯ ಮೊದಲಾದವರು ಉಪಸ್ಥಿತರಿದ್ದರು.
ಭಾರತವನ್ನು ಕ್ರೀಡಾ ಸಾಫ್ಟ್ ಪವರ್ ಆಗಿಸುವುದು ಕೇಂದ್ರದ ಉದ್ದೇಶ: ಅನುರಾಗ್ ಸಿಂಗ್ ಠಾಕೂರ್
ಉಡುಪಿ: ಶನಿವಾರದಂದು ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾ ವಿಜ್ಞಾನ ಕೇಂದ್ರವನ್ನು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವನ್ನು ಕ್ರೀಡಾ ಸಾಫ್ಟ್ ಪವರ್ ಆಗಿ ಪರಿವರ್ತಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದರು. ಕ್ರೀಡೆಯಾಗಿ ಕಬಡ್ಡಿಯು ಫುಟ್ಬಾಲ್ ಮತ್ತು ಕ್ರಿಕೆಟ್‌ನಂತೆ ವೃತ್ತಿಪರ ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ಅಟಲ್ ಜೀ ಸ್ಮರಣಾರ್ಥ ಉಡುಪಿಯ ಎಂಜಿಎಂ ಮೈದಾನದಲ್ಲಿ ಇಂದು ಆರಂಭವಾದ ಅಟಲ್ ಟ್ರೋಫಿಯು ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಮತ್ತು ಭಾರತದಾದ್ಯಂತ […]
ಭಾರತ ಕಂಡ ಶ್ರೇಷ್ಠ ನಾಯಕ ಪ್ರಖರ ವಾಗ್ಮಿ ಯಶಸ್ವಿ ಪ್ರಧಾನಿ: ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ
ಐದು ವರ್ಷಗಳ ಕಾಲ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸಿದ ಭಾರತ ಕಂಡ ಶ್ರೇಷ್ಠ ನಾಯಕ ಮತ್ತು ಶ್ರೇಷ್ಠ ವಾಗ್ಮಿ ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತವನ್ನು ವಿಶ್ವಗುರುವಾಗಿಸುವ ಹಲವಾರು ವಿಷಯಗಳಿಗೆ ಹಾಕಿದ ಅಡಿಪಾಯದ ಫಲವನ್ನು ಇಂದು ಭಾರತೀಯರೆಲ್ಲರೂ ಉಣ್ಣುತ್ತಿದ್ದಾರೆ. ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿ, ಭಾರತ್ ಮಾಲಾ, ಸಾಗಾರ್ ಮಾಲಾ ದಂತಹ ಬೃಹತ್ ಮೂಲಸೌಕರ್ಯ ಯೋಜನೆಗಳಿಗೆ ಅಡಿಪಾಯ, ಗ್ರಾಮ ಸಡಕ್ ಯೋಜನೆ, […]
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆ: ಕೆ. ರಘುಪತಿ ಭಟ್
ಉಡುಪಿ: ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೆ ಉತ್ತೇಜಿಸುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ 24 ರಂದು […]