ಡಿ.24ರಂದು ಅಟಲ್ ಉತ್ಸವ ರಾಷ್ಟ್ರಮಟ್ಟದ ಹೊನಲು‌ ಬೆಳಕಿನ ಕಬಡ್ಡಿ ಪಂದ್ಯಕೂಟ

ಉಡುಪಿ: ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಡಿ. 24ರಂದು ಸಂಜೆ 5ಗಂಟೆಗೆ “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು‌ ಬೆಳಕಿನ ಕಬಡ್ಡಿ ಪಂದ್ಯಕೂಟ ಹಾಗೂ ಡಿ. 25ರಂದು ಸಂಜೆ 4ಗಂಟೆಗೆ ಬೂತ್ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಎರಡು ಕಾರ್ಯಕ್ರಮಗಳೂ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು. ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಮಂಗಳವಾರ […]