ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಚಿತ್ರನಟ ರಕ್ಷಿತ್ ಶೆಟ್ಟಿ

ಶಿವಪಾಡಿ: ಇಲ್ಲಿನ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ. 22 ರಿಂದ ಮಾರ್ಚ್ 05 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ ನಡೆಯಲಿದ್ದು, ಕಾರ್ಯಕ್ರಮದ ತಯಾರಿಗಳು ಭರ್ಜರಿಯಾಗಿ ನಡೆಯುತ್ತಿವೆ. ಈ ಸಂದರ್ಭ ಚಿತ್ರ ನಟ ರಕ್ಷಿತ್ ಶೆಟ್ಟಿ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.