ಸಂಕಲ್ಪ ಸಾಧನೆ: ಯಶಸ್ವಿಯಾಗಿ ಸಮಾಪ್ತಿಗೊಂಡ ಶಿವಪಾಡಿಯ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ ನಡೆದು ಅತ್ಯಂತ ಯಶಸ್ವಿಯಾಗಿ ಇಂದು ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ […]

ಅತಿರುದ್ರ ಮಹಾಯಾಗದ ಸಂಪನ್ನದಿವಸ: ನಡೆಯಲಿರುವ ಕಾರ್ಯಕ್ರಮಗಳ ಮುನ್ನೋಟ

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹನ್ನೊಂದು ದಿನಗಳನ್ನು ಪೂರೈಸಿ, ಇದೀಗ ಸಂಪನ್ನಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಕಳೆದ 11 ದಿನಗಳಲ್ಲಿ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, […]