ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿಅತಿರುದ್ರ ಮಹಾಯಾಗ ಪ್ರಾರಂಭ

ಶಿವಪಾಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ ಶಾಸಕ ರಘುಪತಿ ಭಟ್, ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮಹೇಶ್ ಠಾಕೂರ್, ಬೆಂಗಳೂರಿನ ಮಾಜಿ ವಿಧಾನಸಭಾ ಸದಸ್ಯ ದಯಾನಂದ ರೆಡ್ಡಿ, ಡಾ. ಜಿ. ಶಂಕರ್, ನಟ ರಕ್ಷಿತ್ ಶೆಟ್ಟಿ ಮತ್ತು ಕುಂದಾಪುರ […]

ಶಿವಪಾಡಿ: ಅತಿರುದ್ರ ಮಹಾಯಾಗದಲ್ಲಿ ವಾರಣಾಸಿಯ ಗಂಗಾರತಿಯ ಮಾದರಿ ಶಿವಾರತಿ

ಶಿವಪಾಡಿ: ಇಲ್ಲಿನ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ 22 ರಿಂದ ಮಾರ್ಚ್ 05 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯು ಮಂಗಳವಾರದಂದು ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿತ್ತು. ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಮಾತನಾಡಿ , 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನಗಳ ಕಾಲ ನಡೆಯಲಿರುವ ಅತಿರುದ್ರ ಮಹಾಯಾಗಕ್ಕೆ ಆಗಮಿಸಲಿರುವ 180 ಋತ್ವಿಜರ ವಾಸ್ತವ್ಯಕ್ಕಾಗಿ “ಈಶಾವಾಸ್ಯಾಂ” ವಸತಿ ಗೃಹ ರಚನೆಯಾಗಿದೆ. ಈ […]