ಅತ್ತೂರು ವಾರ್ಷಿಕ ಮಹೋತ್ಸವದ ಸಿದ್ಧತೆ ಭರದಿಂದ ಸಾಗಿದೆ: ಫಾ| ಜಾರ್ಜ್ ಡಿ’ಸೋಜಾ

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವ ವು ಜ. 27ರಿಂದ 31ರ ವರೆಗೆ ಜರಗಲಿದ್ದು ಇದರ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್ ಡಿ’ಸೋಜಾ ಅವರು ತಿಳಿಸಿದ್ದಾರೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.5 ದಿವ್ಯ ಬಲಿಪೂಜೆಗಳು ಕೊಂಕಣಿಯಲ್ಲಿ,11 ಕನ್ನಡದಲ್ಲಿ ನಡೆಯಲಿವೆ. ಶಿವಮೊಗ್ಗ, ಬೆಳ್ತಂಗಡಿ, ಮೈಸೂರು, ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಬಲಿಪೂಜೆ ನೆರವೇರಿಸಲಿದ್ದಾರೆ. ಜ. 28ರಂದು ಪೂರ್ವಾಹ್ನ10ಕ್ಕೆ ಅಸ್ವಸ್ಥರಿಗಾಗಿ ಪೂಜೆ ನಡೆಯಲಿದೆ ಎಂದವರು ಮಾಹಿತಿ ನೀಡಿದರು. […]