ಶ್ರೀ ಕ್ಷೇತ್ರ ಪರ್ಪಲೆಗಿರಿಯ ಪುನರುತ್ಥಾನ ಕಾರ್ಕಳದ ಇತಿಹಾಸದಲ್ಲಿ ಹೊಸ ಅಧ್ಯಾಯ: ಕಾಳಹಸ್ತೇಂದ್ರ ಮಹಾಸ್ವಾಮೀಜಿ
ಕಾರ್ಕಳ : ಶ್ರೀ ಕ್ಷೇತ್ರ ಪರ್ಪಲೆಗಿರಿಯ ಪುನರುತ್ಥಾನದೊಂದಿಗೆ ಕಾರ್ಕಳದ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಗೊಂಡು ಹಿಂದೂ ಸಮಾಜದ ಅಭಿಯಾನಕ್ಕೆ ಹೊಸ ದಿಕ್ಕು ನೀಡಿದಂತಾಗಿದೆ ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮೀಜಿ ನುಡಿದರು. ಅವರು ಫೆ. 11ರಂದು ಶ್ರೀ ಕ್ಷೇತ್ರ ಪರ್ಪಲೆಗಿರಿಯಲ್ಲಿ ಕಲ್ಕುಡ ಸ-ಪರಿವಾರ ದೈವಗಳ ನೂತನ ಗರ್ಭಗುಡಿಯ ಶಿಲಾನ್ಯಾಸ ವಿಧಿ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮಕ್ಕಳಿಗೆ ಎಳವೆಯಲ್ಲೇ ಧಾರ್ಮಿಕ ಪ್ರಜ್ಞೆ, ನಮ್ಮ ಸಂಸ್ಕೃತಿ ಕುರಿತು ಅರಿವು […]
ಫೆ.11 ರಂದು ಅತ್ತೂರು ಪರ್ಪಲೆಗಿರಿ ಕಲ್ಕುಡ ಸ-ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ
ಕಾರ್ಕಳ: ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ (ರಿ) ಕಾರ್ಕಳ ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿ (Atturu Parpalegiri) ಪುನರುತ್ಥಾನ ಸಮಿತಿಯ ನೇತೃತ್ವದಲ್ಲಿ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಲ್ಕುಡ ಸ-ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಫೆ.11 ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.