ಉಡುಪಿ ಜಿಲ್ಲೆ: ಭಾರೀ ಮಳೆಯ ಹಿನ್ನೆಲೆ, ಆ.10 ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ತೀವ್ರ ಮಳೆ ಅಬ್ಬರದ ಹಿನ್ನೆಲೆಯಲ್ಲಿ ಆಗಸ್ಟ್  10 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಆ.10 ರಂದು ಕೂಡ ತೀವ್ರ ಮಳೆಯಾಗುವ ಸಾಧ್ಯತೆ ಇದ್ದು ಜಿಲ್ಲೆಯಾದ್ಯಂತ ಅಲರ್ಟ್ ಘೋಷಿಸಲಾಗಿದೆ.