ಏಕದಿನ ವಿಶ್ವಕಪ್‌ಗೆ ಆಸೀಸ್ ಭರ್ಜರಿ ತಯಾರಿ: ತಂಡದಿಂದ ಸ್ಮಿತ್​, ಸ್ಟಾರ್ಕ್​ ಔಟ್‌

ಮೆಲ್ಬೋರ್ನ್ (ಆಸ್ಟ್ರೇಲಿಯಾ): ಭಾರತದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯುವ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಹಿನ್ನೆಲೆಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20, ಏಕದಿನ ಸರಣಿಯಿಂದ ಅನುಭವಿ ಆಟಗಾರರಾದ ಸ್ಟೀವ್​ ಸ್ಮಿತ್​ ಮತ್ತು ಮಿಚೆಲ್​ ಸ್ಟಾರ್ಕ್ ಅವರನ್ನು ಕೈಬಿಡಲಾಗಿದೆ.ಇಬ್ಬರು ಆಟಗಾರರು ವಿಶ್ವಕಪ್​ಗೂ ಮುನ್ನ ತಂಡ ಸೇರುತ್ತಾರೆ ಎಂದು ಕ್ರಿಕೆಟ್​ ಆಸ್ಟ್ರೇಲಿಯಾ ತಿಳಿಸಿದೆ.ಏಕದಿನ ವಿಶ್ವಕಪ್​ಗೆ ಮುಂಚಿತವಾಗಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಲಿರುವ ಆಸ್ಟ್ರೇಲಿಯಾ ತಂಡದಿಂದ ಸ್ಮಿತ್​ ಮತ್ತು ಸ್ಟಾರ್ಕ್​ ಅವರನ್ನು ಕೈ ಬಿಡಲಾಗಿದೆ. “ವಿಶ್ವ ಟೆಸ್ಟ್​ ಚಾಂಪಿಯನ್‌ ಶಿಪ್​ […]