ಆಟೋ ಚಾಲನೆಯಲ್ಲಿದ್ದಾಗಲೇ ಚಾಲಕನಿಗೆ ಹೃದಯಾಘಾತ ಪರಿಣಾಮ ಸವಾರರಿಗೆ ಗಾಯ

ಉಡುಪಿ: ಆಟೋ ಚಾಲನೆಯಲ್ಲಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ ಪರಿಣಾಮ ಆಟೋ ಆಯತಪ್ಪಿ ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಗಾಯಗೊಂಡ ಘಟನೆ ನಡೆದಿದೆ. ಕಾಡುಬೆಟ್ಟು ನಿವಾಸಿ ರಿಕ್ಷಾ ಚಾಲಕ ಸುರೇಶ ಎಂಬವರು ತಮ್ಮ ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡಿನಿಂದ ಬಸ್ ನಿಲ್ದಾಣದ ಕಡೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿ ಹಠಾತ್ ಆಗಿ ಕುಸಿದು ಬಿದ್ದಿದ್ದಾರೆ. ಅದೇ ರಸ್ತೆಯಲ್ಲಿ ಬರುತ್ತಿದ್ದ ಇನ್ನೋರ್ವ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರು ತಕ್ಷಣವೇ ಸುರೇಶ್ ಅವರನ್ನು […]