ಆಟೋ ಪ್ರಯಾಣ ದರ ರೂ.30 ಕ್ಕೆ ಏರಿಕೆ, ಮೀಟರ್ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ:  ಉಡುಪಿ ಜಿಲ್ಲೆಯ ಆಟೋ ಪ್ರಯಾಣ ದರ ಪರಿಷ್ಕರಣೆ ಕುರಿತಂತೆ ಈಗಿನ ಕನಿಷ್ಠ ದರ ರೂ.25 ರಿಂದ ದರವನ್ನು ರೂ.30 ಕ್ಕೆ ಹೆಚ್ಚಿಸಲು  ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದ್ದು, ಹೆಚ್ಚಳವಾದ ದರ ಏಪ್ರಿಲ್ 1 ರಿಂದ ಅನ್ವಯವಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಆಟೋ ಪ್ರಯಾಣ ದರ ಪರಿಷ್ಕರಣೆ ಕುರಿತ  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 2014 ರಲ್ಲಿ ಆಟೋ ಪ್ರಯಾಣ ಪರಿಷ್ಕರಿಸಿದ ನಂತರ […]