‘ಶಕ್ತಿ’ ಯೋಜನೆಯಿಂದ ಆಟೋಗಳ ವಹಿವಾಟುಗಳಲ್ಲಿ ಶೇ 20ರಷ್ಟು ಕುಸಿತ

ಬೆಂಗಳೂರು ನಗರದಲ್ಲಿ ಆಟೋದಲ್ಲಿ ಸಂಚಾರ ನಡೆಸುವ ಜನರಲ್ಲಿ ಹೆಚ್ಚಿನವರು ಮಹಿಳೆಯರಾಗಿದ್ದರು. ಆದರೆ ಈಗ ಉಚಿತವಾಗಿ ಸಂಚಾರ ನಡೆಸಲು ಬಿಎಂಟಿಸಿ ಬಸ್ ಇರುವ ಕಾರಣ ಮಹಿಳೆಯರು ಬಸ್ ಏರುತ್ತಿದ್ದಾರೆ. ಇದರಿಂದಾಗಿ ಆಟೋ ಚಾಲಕರಿಗೆ ಹೊಡೆತ ಬಿದ್ದಿದೆ. ಬೇಕಾಬಿಟ್ಟಿಯಾಗಿ ದರ ಹೇಳುತ್ತಿದ್ದ ಚಾಲಕರು ಈಗ ಪ್ರಯಾಣಿಕರಿಗಾಗಿ ಕಾಯುವ ಪರಿಸ್ಥಿತಿ ಬಂದಿದೆಕರೆದ ಕಡೆ ಬರುವುದಿಲ್ಲ, ಮೀಟರ್ಗಿಂತ ಹೆಚ್ಚಿನ ಹಣ ವಸೂಲಿ ಹೀಗೆ ಸದಾ ಜನರ ಆಕ್ರೋಶಕ್ಕೆ ತುತ್ತಾಗುವ ಆಟೋ ಚಾಲಕರು ಈಗ ‘ಶಕ್ತಿ’ಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೈಕ್ ಟ್ಯಾಕ್ಸಿಯಿಂದಾಗಿ ನಷ್ಟ ಅನುಭವಿಸುತ್ತಿದ್ದ […]