ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳ ತೆರವಿಗೆ ಸೂಚನೆ

ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ಅಳವಡಿಸದಂತೆ ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ತಪ್ಪಿದ್ದಲ್ಲಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಿ, ಎಫ್.ಐ.ಆರ್ ದಾಖಲಿಸಲು ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ಆಟೋರಿಕ್ಷಾ ಸಂಚಾರದಲ್ಲಿ ಮಾರ್ಪಾಡು

ಉಡುಪಿ: ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿ ಹೊಂದಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳು ರಚನೆಯಾಗಿರುವ ಹಿನ್ನೆಲೆ, ನಗರಗಳ ಜನಸಂಖ್ಯೆಗೆ ಅನುಗುಣವಾಗಿ ಆಟೋರಿಕ್ಷಾಗಳನ್ನು ಹೆಚ್ಚಿಸುವುದು, ರಿಕ್ಷಾ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವುದು, ರಸ್ತೆ ಅಪಘಾತಗಳನ್ನು ತಡೆಯಲು, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತೀ ಅವಶ್ಯವೆಂದು ಪರಿಗಣಿಸಿ, 2012 ಏಪ್ರಿಲ್ 21 ರ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು […]