ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ 300 ಕೋ.ರೂ. ವೆಚ್ಚದ ರಾಮಮಂದಿರ ನಿರ್ಮಾಣ

ಉಡುಪಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ನ ಸದಸ್ಯರೂ ಆಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಇಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ರಾಮಮಂದಿರ ನಿರ್ಮಿಸುವ 700 ಎಕರೆ ಪರಿಸರದ ಅಭಿವೃದ್ಧಿಗೆ 1000 ಕೋಟಿ ರೂ.  ಅವಶ್ಯವಿದ್ದು, ವಿವಿಧ ಕಂಪೆನಿಗಳ ಸಿಎಸ್ ಆರ್ ನಿಧಿಯಿಂದ ಸಂಗ್ರಹಿಸುವ ಗುರಿ […]