ರಾಮಮಂದಿರ ಭೂಮಿಪೂಜೆಯ ಹಿನ್ನೆಲೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳಿಂದ ಲಕ್ಷಾತುಳಸಿ ಅರ್ಚನೆ

ಉಡುಪಿ: ಬ್ರಹ್ಮಾವರ ತಾಲ್ಲೂಕಿನ ನೀಲಾವರ ಗೋಶಾಲೆಯ ಶಾಖಾ ಮಠದಲ್ಲಿ ಚಾತುರ್ಮಾಸ್ಯದಲ್ಲಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ರಾಮಮಂದಿರ ಭೂಮಿಪೂಜೆ ಸಂದರ್ಭದಲ್ಲಿ  ವಿಶೇಷ ಪೂಜೆ ಸಲ್ಲಿಸಿದರು. ದೇವರಿಗೆ ವಿಶೇಷ ಲಕ್ಷಾತುಳಸಿ ಅರ್ಚನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವೇಶತೀರ್ಥ ಸ್ವಾಮೀಜಿಯ ಭಾವಚಿತ್ರಕ್ಕೂ ವಿಶೇಷ ಪೂಜೆ ಸಲ್ಲಿಸಲಾಯಿತು.