ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕಡಿಯಾಳಿ ದೇಗುಲದಲ್ಲಿ ಸಾಮೂಹಿಕ ರಾಮತಾರಕ ಮಂತ್ರ ಜಪಪಠಣ 

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಕಡಿಯಾಳಿಯ ಮಹಿಷಮರ್ಧಿನಿ ದೇವಸ್ಥಾನದ ಕಾತ್ಯಾಯಿನಿ ಮಂಟಪದಲ್ಲಿ ಮಂಗಳವಾರ ಸಾಮೂಹಿಕ ರಾಮತಾರಕ ಮಂತ್ರ ಜಪಪಠಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹನುಮಾನ್ ಚಾಲೀಸ್ ಪಠಣ, ಶ್ರೀರಾಮ ಸಂಕೀರ್ತನೆ ನಡೆಯಿತು. ರಾಮದೇವರ ಪ್ರತಿಷ್ಠೆ, ಗಣಹೋಮ ಜರುಗಿತು. ಬಳಿಕ ನಡೆದ ಧಾರ್ಮಿಕ ಸಭಾಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದು ಪರಿಷತ್ ದಕ್ಷಿಣ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ರಾಮಮಂದಿರ ಭಾರತ ದೇಶದ ಪರಂಪರೆಯ ಪ್ರತೀಕ. ಹಾಗಾಗಿ ಧಾರ್ಮಿಕ ಅನುಷ್ಠಾನಗಳ ಮೂಲಕ ರಾಮಮಂದಿರ […]