ಶ್ರೀ ರಾಮಮಂದಿರ ನಿರ್ಮಾಣ ಕಾರ್ಯ ಸದ್ಯಕ್ಕಿಲ್ಲ:ಟ್ರಸ್ಟ್

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆರಂಭಿಸುವ ಯೋಜನೆಯನ್ನು ಸದ್ಯ ಭಾರತ– ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ  ಮುಂದೂಡಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್‌ ತಿಳಿಸಿದೆ. ಸದ್ಯ ಗಡಿಯಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಗಾಲ್ವನ್‌ ಕಣಿವೆಯಲ್ಲಿ ಭಾರತದ ಯೋಧರು ಹುತಾತ್ಮರಾದ ಬಗ್ಗೆ ಶೋಕ ವ್ಯಕ್ತಪಡಿಸಿರುವ ಟ್ರಸ್ಟ್‌ ಮಂದಿರ ನಿರ್ಮಾಣ ಆರಂಭಿಸುವ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದಿದೆ.