ಪ್ರಕೃತಿಗೆ ಸಮೀಪವಾಗಿ ಬದುಕುವ ಆಯುರ್ವೇದದ ಆರೋಗ್ಯಕರ ಜೀವನ ಪದ್ದತಿ ಆಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಪ್ರಕೃತಿಯೊಂದಿಗೆ ಬಾಳುವುದು ಮಾನವನ ಜೀವನ ವಿಧಾನ. ಪ್ರಕೃತಿಗೆ ಹತ್ತಿರವಾಗಿದ್ದುಕೊಂಡು ಆರೋಗ್ಯಕರವಾಗಿ ಜೀವನ ನಡೆಸಬೇಕು ಎಂಬ ತಿಳುವಳಿಕೆ ನೀಡುವ ಆಯುರ್ವೇದ ಪದ್ದತಿಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಧುನಿಕ ವೈದ್ಯಕೀಯ ಪದ್ದತಿಯಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಆಯುರ್ವೇದವು ವ್ಯಕ್ತಿಯು ತನ್ನ ಆರೋಗ್ಯವನ್ನು ಪ್ರತಿದಿನದ ತನ್ನ ಜೀವನ ಪದ್ದತಿಯಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸುತ್ತದೆ. ಇದರಲ್ಲಿ ಯಾವುದೇ ಅಡ್ಡಪರಿಣಾಮಗಳಿಲ್ಲ. ಆಯುರ್ವೇದ ಸೂತ್ರಗಳನ್ನು ಪ್ರತಿದಿನದ ನಮ್ಮ ದಿನಚರಿಯಲ್ಲಿ ಪಾಲಿಸಬೇಕು ಎಂದರು. ಅವರು ಆದಿತ್ಯವಾರದಂದು ಅಜ್ಜರಕಾಡು ಜಿಲ್ಲಾ ಆಯುಷ್ […]

ಎಸ್.ಡಿ.ಎಂ ಆಯುರ್ವೇದ ಕಾಲೇಜಿನಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನ ಅದ್ದೂರಿ ಆಚರಣೆ

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಮತ್ತು ಆಸ್ಪತ್ರೆಯಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಡಾ ಮಮತಾ ಕೆ.ವಿ ಮಾತನಾಡಿ, ಆಯುರ್ವೇದವೇ ಜೀವನದ ಸಂಸ್ಕೃತಿ ಮತ್ತು ಸಂಸ್ಕಾರವಾಗಿರಬೇಕು ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಮಾನವ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು ಸವಿಸ್ತಾರವಾಗಿ ವಿವರಿಸಿ ಮಾನವ ಪ್ರಕೃತಿ ಜೊತೆ ಸಹಬಾಳ್ವೆ ನಡೆಸಬೇಕು ಎಂದರು. ಈ ಸಂದರ್ಭದಲ್ಲಿ ಜನಪರ ವೈದ್ಯ ಸಂಶೋಧನಾ ಕೇಂದ್ರದ ವತಿಯಿಂದ […]