ಆಹಾರದಲ್ಲಿ ರಾಸಾಯನಿಕಗಳ ಬಳಕೆಯಿಂದ ಮಾರಕ ಕಾಯಿಲೆಗಳು : ಶೋಭಾ ಕರಂದ್ಲಾಜೆ

  ಉಡುಪಿ: ಪ್ರತಿನಿತ್ಯ ಉಪಯೋಗಿಸುವ ಆಹಾರದಲ್ಲಿ ರಾಸಾಯನಿಕ ವಸ್ತುಗಳ ಹೆಚ್ಚಿನ ಬಳಕೆಯಿಂದ ಕ್ಯಾನ್ಸರ್, ಕಿಡ್ನಿರೋಗದಂತಹ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೋಟರಿ ಮಿಡ್ ಟೌನ್, ರಾಷ್ಟ್ರೀಯ ಆರೋಗ್ಯ […]

ಆಯುಷ್ಮಾನ್ ಯೋಜನೆ ಆರೋಗ್ಯ ಕರ್ನಾಟಕ ಯೋಜನೆಗೆ ವಿಲೀನ, ಬಡವರಿಗೆ ತೊಂದರೆ: ರಘಪತಿ ಭಟ್

ಉಡುಪಿ: ಕೇಂದ್ರ ಸರಕಾರದ‌ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ರೋಗಿ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆದರೆ ರಾಜ್ಯ ಸರಕಾರ ಆರೋಗ್ಯ ಕರ್ನಾಟಕ ಯೋಜನೆಯಡಿ ವಿಲೀನಗೊಳಿಸಿ, ಬಡವರನ್ನು ವೈದ್ಯಕೀಯ ಸೇವೆ ವಂಚಿತರನ್ನಾಗಿ ಮಾಡಿದೆ. ಇದರಿಂದ ಬಡ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಯೋಜನೆ ಪ್ರತ್ಯೇಕವಾಗಿಸುವ ಜತೆಗೆ ಜಿಲ್ಲಾಸ್ಪತ್ರೆಗಳ ಶಿಫಾರಸ್ಸು ಪತ್ರ ಪಡೆಯುವ ಪದ್ಧತಿ ಕೈಬಿಡಲು ಮಳೆಗಾಲದ ಅಧಿವೇಶನದಲ್ಲಿ ಆಗ್ರಹಿಸಲಾಗುವುದು ಎಂದು ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು. ಉಡುಪಿ ಆದರ್ಶ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ […]