ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೆಗಾ ಕರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ

ಕುಂದಾಪುರ : ಸಿ.ಎ, ಸಿ.ಎಸ್ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳು ಸಾಕಷ್ಟು ಪೂರ್ವ ಸಿದ್ದತೆ ನಡೆಸಬೇಕು. ನಿರಂತರ ಪರಿಶ್ರಮ ಮತ್ತು ಸಾಧಿಸುವ ತುಡಿತವಿದ್ದರೆ ಖಂಡಿತವಾಗಿಯೂ ಸಿ.ಎ, ಸಿ.ಎಸ್ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಐ.ಸಿ.ಎ.ಐ. ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿ.ಎ ಕೋತಾ ಎಸ್. ಶ್ರೀನಿವಾಸ್ ಹೇಳಿದರು. ಅವರು ಜೂನ್ 8 ರಂದು ಐ.ಸಿ.ಎ.ಐ. ಉಡುಪಿ ಶಾಖೆಯ ಎಸ್.ಐ.ಆರ್.ಸಿ. ಹಾಗೂ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿದ್ದ ಮೆಗಾ ಕರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೇನಾನಿ […]

ಬಿಬಿ ಹೆಗ್ಡೆ ಕಾಲೇಜು: ಬಿ.ಸಿ.ಎ. ಪದವಿಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ

ಕುಂದಾಪುರ: ಜೂನ್ 12 ಭಾನುವಾರದಂದು ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ‍್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಸಾಧಕಿ ಕಾವ್ಯ ದೇವಾಡಿಗ ಹಾಗೂ ನಾಲ್ಕನೆ ರ‍್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರನ್ನು ಕರ್ನಾಟಕ ಬ್ಯಾಂಕ್ ಸಿಇಒ ಮಹಾಬಲೇಶ್ವರ್ ಎಮ್.ಎಸ್. ಸನ್ಮಾನಿಸಿದರು. ಜಿಲ್ಲಾಧಿಕಾರಿ ಕೂರ್ಮಾ ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಐ.ಎ.ಎಸ್. ಮತ್ತು ಐ.ಪಿ.ಎಸ್. ಕ್ಷೇತ್ರದಲ್ಲಿ ಸಾಧನೆ ಮಾಡಿ ಶ್ರೇಷ್ಠ ಸಾಧಕರಾಗಿರಿ ಎಂದರು. ಕುಂದಾಪುರ ಎಜ್ಯುಕೇಶನ್ […]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕಯಂತ್ರ ಪ್ರಯೋಗಾಲಯ ಉದ್ಘಾಟನೆ

ಕುಂದಾಪುರ: ಜೂನ್12 ರಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕಯಂತ್ರ ಪ್ರಯೋಗಾಲಯದ ಉದ್ಘಾಟನಾ ಸಮಾರಂಭವು ಜರುಗಿತು. ಕರ್ನಾಟಕ ಬ್ಯಾಂಕ್ ನ ಸಿ.ಇ.ಒ. ಮಹಾಬಲೇಶ್ವರ್ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ಓದಬಾರದು ಆದರೆ ಇಷ್ಟಪಟ್ಟು ಓದಬೇಕು. ಜೊತೆಗೆ ಕೆಲಸ ಕಾರ್ಯದಲ್ಲಿ ಚಾತುರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭಾಗವಹಿಸಿದ್ದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ […]

ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಮಣ್ಣು ಉಳಿಸಿ ಅಭಿಯಾನ ಕಾರ್ಯಕ್ರಮ

ಕುಂದಾಪುರ: ಮಣ್ಣಿನ ನೈಸರ್ಗಿಕ ಗುಣಲಕ್ಷಣಗಳು ಹಾಗೂ ಸ್ವರೂಪಗಳು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಕೃತಕ ರಾಸಾಯನಿಕ ಗೊಬ್ಬರಗಳ ಬಳಕೆ ಹಾಗೂ ವಿಷಪೂರಿತ ತ್ಯಾಜ್ಯದಿಂದಾಗಿ ಮಣ್ಣಿನ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿಯಾದ ವಿಷಯ ಎಂದು ಇಶಾ ಫೌಂಡೇಶನ್ ಕೊಯಮುತ್ತೂರು ಇದರ ಸ್ವಯಂ ಸೇವಕರಾದ ಶ್ರೀ ಬಿ.ಎನ್. ವೆಂಕಟೇಶ್‌ ಹೇಳಿದರು. ಅವರು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಇಶಾ ಫೌಂಡೇಶನ್ ಆಯೋಜಿಸಿದ ಮಣ್ಣು ಉಳಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತನ್ನ ಮೂಲ ಸತ್ವವನ್ನು ಕಳೆದುಕೊಳ್ಳುತ್ತಿರುವ ಮಣ್ಣನ್ನು […]