ಬಿ ಎಡ್ ಕೋರ್ಸ್ ಇನ್ನು ಐದು ವರ್ಷ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಮೇಜರ್ ಸರ್ಜರಿ ನಡೆದಿದೆ. ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನ್ವಯ ಬಿ ಎಡ್ ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ, ಕೋರ್ಸನ್ನು 5 ವರ್ಷಗಳ ಅವಧಿಗೆ ವಿಸ್ತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.